ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಅಂಬೇಡ್ಕರ್ ಅಧ್ಯಯನ ಇಂದಿನ ಸಮಸ್ಯೆಗಳಿಗೆ ಪರಿಹಾರ : ಶ್ರೀ ಗಣೇಶ್ ಶೆಟ್ಟಿ

ಡಾ. ಬಿ.ಆರ್. ಅಂಬೇಡ್ಕರ್ ಕೇವಲ ಒಬ್ಬ ವ್ಯಕ್ತಿಯಲ್ಲ; ಅವರೊಬ್ಬ ಮಹಾನ್ ಶಕ್ತಿ. ಅಂಬೇಡ್ಕರ್ ಅವರ ಅಧ್ಯಯನ ಶೀಲತೆ ಮತ್ತು ಬರಹಗಳು ವಿಶಿಷ್ಟ ದೃಷ್ಟಿಕೋನವನ್ನು ನೀಡುತ್ತದೆ. ವಿದ್ಯಾರ್ಥಿಗಳು ಅಂಬೇಡ್ಕರ್ ಅವರ ಬದುಕು ಮತ್ತು ಬರಹಗಳನ್ನು ಆಮೂಲಾಗ್ರವಾಗಿ ಅಧ್ಯಯನ ಮಾಡಬೇಕು. ಇಂದು ಸಮಾಜ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳಿಗೂ ಅವರ ವಿಚಾರಧಾರೆಗಳಲ್ಲಿ ಪರಿಹಾರವಿದೆ ಎಂದು ಹಟ್ಟಿಯಂಗಡಿ ನಮ್ಮ ಭೂಮಿಯ ಸಂಪನ್ಮೂಲ ವ್ಯಕ್ತಿ ಮತ್ತು ರಂಗಕರ್ಮಿ ಶ್ರೀ ಗಣೇಶ್ ಶೆಟ್ಟಿ ಹೇಳಿದರು.

ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಹಾಗೂ ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಓದು ಕಾರ್ಯಕ್ರಮದ ಸಮಾರೋಪ ಹಾಗೂ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ನಿವೃತ್ತ ಕನ್ನಡ ಪ್ರಾಧ್ಯಾಪಕ ಹಾಗೂ ಚಿಂತಕ ಡಾ. ಗಣನಾಥ ಎಕ್ಕಾರು ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿಯ ಸಹಾಯಕ ನಿರ್ದೇಶಕಿ ಶ್ರೀಮತಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾಲೇಜಿನ ನಿರ್ವಹಣಾ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ವಸಂತ ಜಿ. ಅವರು ಕಾರ್ಯಕ್ರಮವನ್ನು ನಿರ್ವಹಿಸಿ ವಂದಿಸಿದರು.
ಈ ಸಂದರ್ಭದಲ್ಲಿ ಅಂಬೇಡ್ಕರ್ ಓದು ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

Leave a Reply

Your email address will not be published. Required fields are marked *