ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ನಮ್ಮ ಕರ್ನಾಟಕ ಸೇನೆಯ ರಾಜ್ಯಮಟ್ಟದ ಸಭೆಯಲ್ಲಿ ಸುಜಯ್ ಪೂಜಾರಿ ಅವರಿಗೆ ನಾಲ್ಕು ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿ

ಬೆಂಗಳೂರು : ನಮ್ಮ ಕರ್ನಾಟಕ ಸೇನೆಯ ರಾಜ್ಯಮಟ್ಟದ ಸಭೆಯು ಭಾನುವಾರ ಬೆಂಗಳೂರಿನ ಗಾಂಧಿನಗರದಲ್ಲಿರುವ ಸ್ಯಾಂಕ್ಟಮ್ ಹೋಟೆಲ್‌ನಲ್ಲಿ ನಡೆಯಿತು. ಸಂಘಟನೆಯ ರಾಜ್ಯಾಧ್ಯಕ್ಷರಾದ ಶ್ರೀ ಎಂ. ಬಸವರಾಜ್ ಪಡುಕೋಟೆ ಅವರ ಜನ್ಮದಿನದ ವಿಶೇಷ ಸಂದರ್ಭದಲ್ಲಿ ಈ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯಲ್ಲಿ ಸಂಘಟನೆಯ ರಾಜ್ಯ ಪದಾಧಿಕಾರಿಗಳು, ವಿವಿಧ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಹಾಗೂ ತಾಲೂಕು ಅಧ್ಯಕ್ಷರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನಮ್ಮ ಕರ್ನಾಟಕ ಸೇನೆಯ ಉಡುಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುಜಯ್ ಪೂಜಾರಿ ಅವರಿಗೆ ಹೆಚ್ಚುವರಿಯಾಗಿ ನಾಲ್ಕು ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿಯನ್ನು ವಹಿಸಲಾಯಿತು. ಇನ್ನು ಮುಂದೆ ಸುಜಯ್ ಪೂಜಾರಿ ಅವರು ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಕಾರವಾರ ಜಿಲ್ಲೆಗಳ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಜಿಲ್ಲೆಗಳಲ್ಲಿ ಸಂಘಟನೆಯನ್ನು ಬಲಪಡಿಸುವುದು, ಹೊಸ ಪದಾಧಿಕಾರಿಗಳ ನೇಮಕಾತಿ, ಸದಸ್ಯತ್ವ ಅಭಿಯಾನವನ್ನು ವಿಸ್ತರಿಸುವುದು ಹಾಗೂ ಕನ್ನಡ ನಾಡು, ನುಡಿ, ನೆಲ ಮತ್ತು ಜಲದ ರಕ್ಷಣೆಯ ಉದ್ದೇಶದಿಂದ ಸಂಘಟನೆಯನ್ನು ಮತ್ತಷ್ಟು ಸಕ್ರಿಯಗೊಳಿಸುವ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆ.

ತಮ್ಮ ಮೇಲೆ ವಿಶ್ವಾಸವಿಟ್ಟು ಮಹತ್ವದ ಜವಾಬ್ದಾರಿಯನ್ನು ವಹಿಸಿರುವ ಸಂಘಟನೆಯ ಆತ್ಮೀಯ ರಾಜ್ಯಾಧ್ಯಕ್ಷರಾದ ಶ್ರೀ ಎಂ. ಬಸವರಾಜ್ ಪಡುಕೋಟೆ ಅವರಿಗೆ ಸುಜಯ್ ಪೂಜಾರಿ ಅವರು ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.ಈ ಹೊಸ ಜವಾಬ್ದಾರಿಯ ಮೂಲಕ ನಾಲ್ಕು ಜಿಲ್ಲೆಗಳಲ್ಲಿ ಸಂಘಟನೆಯ ಕಾರ್ಯಚಟುವಟಿಕೆಗಳನ್ನು ವಿಸ್ತರಿಸಿ, ಕನ್ನಡಿಗರ ಹಿತಾಸಕ್ತಿ ಹಾಗೂ ಕನ್ನಡ ನಾಡು, ನುಡಿ, ನೆಲ, ಜಲದ ರಕ್ಷಣೆಯ ಕಾರ್ಯದಲ್ಲಿ ಮತ್ತಷ್ಟು ತೊಡಗಿಸಿಕೊಳ್ಳುವ ಸಂಕಲ್ಪವನ್ನು ಅವರು ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *