ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ನ. 1ರಂದು ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ನವೀಕೃತ ಕಾರ್ಯಾಲಯ ಉದ್ಘಾಟನೆ

ಉಡುಪಿಯ ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ಇದರ ನವೀಕೃತ ಕಾರ್ಯಾಲಯದ ಉದ್ಘಾಟನಾ ಸಮಾರಂಭವು ನ. 1ರಂದು ಭಾನುವಾರ ಪೂರ್ವಾಹ್ನ 11.30ಕ್ಕೆ ಉಡುಪಿಯ ಬ್ರಹ್ಮಗಿರಿಯ ಆದರ್ಶ್ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್ ಉದ್ಘಾಟಿಸಲಿದ್ದಾರೆ.

ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್‌ಪಾಲ್ ಎ. ಸುವರ್ಣ ಅವರು ಸಮಾಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಎಂ. ಎ. ಗಫೂರ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ಭಾಗವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಸಹಕಾರ ಸಂಘಗಳ ಉಪ ನಿಬಂಧಕರಾದ ಲಾವಣ್ಯ ಕೆ.ಆರ್. ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಸಂಘದ ಅಧ್ಯಕ್ಷರಾದ ರೆನೋಲ್ಡ್ ಪ್ರವೀಣ್ ಕುಮಾರ್, ಉಪಾಧ್ಯಕ್ಷ ಜಯನ್ ಮಲ್ಪೆ, ನಿರ್ದೇಶಕರುಗಳಾದ ಕೆ. ಕೃಷ್ಣಮೂರ್ತಿ ಆಚಾರ್ಯ, , ಬಿ.ಎಲ್. ನರಸಿಂಹಸ್ವಾಮಿ, ಹರಿದಾಸ ಭಟ್, ಶಾಮ ಶೆಟ್ಟಿ, ಶೇಖರ ಶೆಟ್ಟಿ, ಜಿತೇಶ್ ಕುಮಾರ್, ಮಹಮ್ಮದ್ ರಫೀಕ್ ಖಾನ್, ರವಿಪ್ರಕಾಶ್, ಅನಂತ ನಾಯ್ಕ್, ಸುಲೋಚನ ದಾಮೋದರ್, ವಿನಯ ಪ್ರಕಾಶ್, ಕಾರ್ಯದರ್ಶಿ ಜಲೇಂದ್ರ ಕೋಟ್ಯಾನ್ ಉಪಸ್ಥಿತರಿರುವರು.

Leave a Reply

Your email address will not be published. Required fields are marked *