ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕಟಪಾಡಿಯಲ್ಲಿ ನವೆಂಬರ್ 15ರಂದು ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸಿಎಸ್‌ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆ, ಉಡುಪಿ ಇವರ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ವತಿಯಿಂದ, ಎಸ್.ವಿ.ಎಸ್. ವಿದ್ಯಾವರ್ಧಕ ಸಂಘ, ಕಟಪಾಡಿ, ರೋಟರಿ ಕ್ಲಬ್, ಕಟಪಾಡಿ ಹಾಗೂ ಮಹಿಳಾ ಸಮಾಜ, ವೆಂಕಟರಮಣ ದೇವಸ್ಥಾನ, ಕಟಪಾಡಿ ಇವರ ಸಹಯೋಗದೊಂದಿಗೆ ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

ಈ ಶಿಬಿರವು ದಿನಾಂಕ 15 ನವೆಂಬರ್ 2026, ಭಾನುವಾರ*, ಬೆಳಿಗ್ಗೆ 9.00ರಿಂದ ಮಧ್ಯಾಹ್ನ 2.00ರವರೆಗೆ, ಕಟಪಾಡಿಯಲ್ಲಿರುವ ಲೊಂಬಾರ್ಡ್ ಮಿಷನ್ ಆಸ್ಪತ್ರೆಯ ಆರೋಗ್ಯ ಕೇಂದ್ರದಲ್ಲಿ (ಹಳೆಯ ಸರ್ಕಾರಿ ಆಸ್ಪತ್ರೆ ಸಮೀಪ) ನಡೆಯಲಿದೆ.ಮಹಿಳೆಯರಲ್ಲಿ ಕಂಡುಬರುವ ವಿವಿಧ ಆರೋಗ್ಯ ಸಮಸ್ಯೆಗಳ ಕುರಿತು ಅರಿವು ಮೂಡಿಸುವುದು, ಆರಂಭಿಕ ಹಂತದಲ್ಲಿಯೇ ಸ್ತ್ರೀರೋಗ ಸಮಸ್ಯೆಗಳನ್ನು ಗುರುತಿಸುವುದು ಹಾಗೂ ಸೂಕ್ತ ವೈದ್ಯಕೀಯ ಸಲಹೆ ಮತ್ತು ಚಿಕಿತ್ಸೆಯನ್ನು ಒದಗಿಸುವುದು ಈ ಶಿಬಿರದ ಮುಖ್ಯ ಉದ್ದೇಶವಾಗಿದೆ.ಶಿಬಿರದಲ್ಲಿ ಹಿರಿಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ *ಡಾ. ದೀಪಾ ವೈ. ರಾವ್, ಪ್ರಸೂತಿ ಮತ್ತು ಸ್ತ್ರೀರೋಗ ಹಾಗೂ ಲ್ಯಾಪರೋಸ್ಕೋಪಿಕ್ ಶಸ್ತ್ರಚಿಕಿತ್ಸಾ ತಜ್ಞರಾದ ಡಾ. ಅಕ್ಷತಾ ಎಸ್. ರಾವ್ ಮತ್ತು ಡಾ. ಅಕ್ಷಮಹಾದೇವಿ ಅವರು ಭಾಗವಹಿಸಿ ಮಹಿಳೆಯರಿಗೆ ಆರೋಗ್ಯ ತಪಾಸಣೆ ಹಾಗೂ ಅಗತ್ಯ ವೈದ್ಯಕೀಯ ಸಲಹೆ ನೀಡಲಿದ್ದಾರೆ.

ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಪ್ರೋತ್ಸಾಹಿಸುವುದರ ಜೊತೆಗೆ, ಸ್ತ್ರೀರೋಗ ಸಂಬಂಧಿತ ಸಮಸ್ಯೆಗಳಿಗೆ ತಜ್ಞ ವೈದ್ಯರಿಂದ ಸಲಹೆ ಪಡೆಯಲು ಈ ಶಿಬಿರವು ಉತ್ತಮ ಅವಕಾಶವಾಗಿದೆ.ಸಾರ್ವಜನಿಕರು, ವಿಶೇಷವಾಗಿ ಮಹಿಳೆಯರು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಉಚಿತ ಆರೋಗ್ಯ ಶಿಬಿರದ ಪ್ರಯೋಜನ ಪಡೆದು ಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:+91 92424 64674 +91 81474 80585 ವೆಬ್‌ಸೈಟ್: www.lombardhospital.in

Leave a Reply

Your email address will not be published. Required fields are marked *