ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಯಡಬೆಟ್ಟು- ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 3 ದಿನಗಳ ಕೌಶಲ್ಯಾಭಿವೃದ್ಧಿ ತರಬೇತಿ ಗ್ರಾಮಾಭಿವೃದ್ಧಿಯಿಂದ ಜನ ಕಲ್ಯಾಣಯೋಜನೆ- ಕೆ.ವಿ ರಮೇಶ್ ರಾವ್

ಕೋಟ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನ ಕಲ್ಯಾಣ ಸಾಧ್ಯ ಎಂಬುವುದನ್ನು ಕಾವಂದರರು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ತೊರಿಸಿಕೊಟ್ಟಿದ್ದಾರೆ ಎಂದು ಪಾಂಡೇಶ್ವರ ರಕ್ತೇಶ್ವರಿ ದೇಗುಲದ ಧರ್ಮದರ್ಶಿ ಕೆ.ವಿ ರಮೇಶ್ ರಾವ್ ಹೇಳಿದರು.ಬುಧವಾರ ಪಾಂಡೇಶ್ವರ ಯಡಬೆಟ್ಟುವಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಉಡುಪಿಯ ರಾಷ್ಟ್ರೀಯ ಸ್ವ-ಸಹಾಯ ಸಂಘ ತರಬೇತಿ ಸಂಸ್ಥೆಯಲ್ಲಿ ((NIST) ಸಂಘದ ಸದಸ್ಯರಿಗಾಗಿ ಹಮ್ಮಿಕೊಳ್ಳಲಾಗಿದ್ದ ನ.16ರಿಂದ 18 ರವರೆಗೆ ಮೂರು ದಿನಗಳ ವಿಶೇಷ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ಮಹಿಳೆಯರು ಸ್ವಾವಲಂಬಿ ಬದುಕಿಗೆ ವಿವಿಧ ರೀತಿಯ ತರಬೇತಿಗಳು ಸಹಕಾರಿಯಾಗಿವೆ ಈ ಮೂಲಕ ತಮ್ಮ ಮೌಲ್ಯಯುತ ಜೀವನಕ್ಕೆ ಮುನ್ನುಡಿ ಬರೆಯುತ್ತಿದ್ದಾರೆ ಎಂದು ಗ್ರಾಮಾಭಿವೃದ್ಧಿ ಯೋಜನೆಗಳ ಕಾರ್ಯವೈಖರಿಯನ್ನು ಕೊಂಡಾಡಿದರು.

ಯೋಜನೆಯ ಜೆ.ಎಲ್.ಜಿ, ಎಸ್.ಎಚ್.ಜಿ ಹಾಗೂ ಪಿ.ಬಿ.ಜಿ ಗುಂಪಿನ ಸದಸ್ಯರಿಗೆ ಸ್ವ-ಉದ್ಯೋಗ ಕೈಗೊಳ್ಳಲು ಅನುಕೂಲವಾಗುವಂತೆ ಈ ತರಬೇತಿಯನ್ನು ಸಂಪನ್ಮೂಲ ವ್ಯಕ್ತಿಯಾಗಿ ಚೈತ್ರಾ ಆಚಾರ್ ನೀಡಲಾಯಿತು. ಮೂರು ದಿನಗಳ ತರಬೇತಿ ಭಾಗಿಯಾದರವರಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು. ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ತರಬೇತಿ ಸಂಸ್ಥೆಯ ಉಪನ್ಯಾಸಕರಾದ ಸಂದೀಪ್ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ರಮೇಶ್ ಪಿ.ಕೆ, ಸ್ಥಳೀಯರಾದ ಸುಮಿತ್ರ ಯಡಬೆಟ್ಟು, ಪತ್ರಕರ್ತ ರವೀಂದ್ರ ಕೋಟ, ಉಪಸ್ಥಿತರಿದ್ದರು.

ಧರ್ಮಸ್ಥಳ ಗ್ರಾ.ಯೋ.ಪಾಂಡೇಶ್ವರ ವಲಯದ ಮೇಲ್ವಿಚಾರಕ ಜಗದೀಶ್ ಸ್ವಾಗತಿಸಿದರು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನವಿಕಾಸ ಸಮನ್ವಯ ಅಧಿಕಾರಿ ಪುಷ್ಭಲತಾ ನಿರೂಪಿಸಿ,ಸೇವಾಪ್ರತಿನಿಧಿ ಶೋಭಾ ವಂದಿಸಿದರು. ಪಾoಡೇಶ್ವರ ಯಡಬೆಟ್ಟುವಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಉಡುಪಿಯ ರಾಷ್ಟ್ರೀಯ ಸ್ವ-ಸಹಾಯ ಸಂಘ ತರಬೇತಿ ಸಂಸ್ಥೆಯಲ್ಲಿ (NIST) ಸಂಘದ ಸದಸ್ಯರಿಗಾಗಿ ಹಮ್ಮಿಕೊಳ್ಳಲಾಗಿದ್ದ ನ.16ರಿಂದ 18 ರವರೆಗೆ ಮೂರು ದಿನಗಳ ವಿಶೇಷ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪಾoಡೇಶ್ವರ ರಕ್ತೇಶ್ವರಿ ದೇಗುಲದ ಧರ್ಮದರ್ಶಿ ಕೆ.ವಿ ರಮೇಶ್ ರಾವ್ ತರಬೇತಿ ಭಾಗಿಯಾದರವರಿಗೆ ಪ್ರಮಾಣಪತ್ರವನ್ನು ವಿತರಿಸಿದರು.

ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ತರಬೇತಿ ಸಂಸ್ಥೆಯ ಉಪನ್ಯಾಸಕರಾದ ಸಂದೀಪ್ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ರಮೇಶ್ ಪಿ.ಕೆ,ಸ್ಥಳೀಯರಾದ ಸುಮಿತ್ರ ಯಡಬೆಟ್ಟು, ಪತ್ರಕರ್ತ ರವೀಂದ್ರ ಕೋಟ ಇದ್ದರು.

Leave a Reply

Your email address will not be published. Required fields are marked *