ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಸ್ನೇಹಕೂಟ ಮಣೂರು ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 58ರ ಸರಣಿಯು ಕಾರ್ಯಕ್ರಮದ ಅಂಗವಾಗಿ ಸಾಧಕ ಕೃಷಿಕರ ಮನೆ ಅಂಗಳಕ್ಕೆ ತೆರಳಿ ಕೃಷಿ ಪರಿಕರವನ್ನು ನೀಡಿ ಗೌರವಿಸುವ ಕಾರ್ಯ ಇದೇ ನ.29ರ ಭಾನುವಾರ ಬೆಳಿಗ್ಗೆ 11.00ಕ್ಕೆ ನಡೆಯಲಿದೆ. ಇಲ್ಲಿನ ಕುಂದಾಪುರ ತಾಲೂಕಿನ ಕೊರವಡಿ ಕೃಷ್ಣ ಪೂಜಾರಿ ಕಣ್ಕುಮನೆ ಇವರಿಗೆ ರೈತ ಪುರಸ್ಕಾರ ನೀಡಿ ಗೌರವಿಸಲಿದೆ ಎಂದು ಸಂಘದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ,ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Leave a Reply