ಉಡುಪಿ: ಸಂತೆಕಟ್ಟೆಯಲ್ಲಿ ನಡೆಯುತ್ತಿರುವ ಅಂಡರ್ ಪಾಸ್ ಕಾಮಗಾರಿ ಪ್ರದೇಶದಲ್ಲಿ ಮಣ್ಣು ಕುಸಿಯುತ್ತಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಳೆದ ಕೆಲವು ದಿನಗಳಿಂದ ವ್ಯಾಪಕ ಸುರಿದ ಮಳೆಯಿಂದಾಗಿ ಸಂತೆಕಟ್ಟೆಯಲ್ಲಿ ಆರಂಭಗೊಂಡಿರುವ ಅಂಡರ್ ಪಾಸ್ ಕಾಮಗಾರಿ ನಡೆಯುವ ಪ್ರದೇಶದಲ್ಲಿ ಮಣ್ಣು ಕುಸಿಯಲಾರಂಭಿಸಿದ್ದು, ಇದರಿಂದ ಇಲ್ಲಿ ನಿರ್ಮಿಸಲಾದ ತಡೆಗೋಡೆಗಳಿಗೂ ಹಾನಿಯಾಗಿದೆ ಅಷ್ಟು ಮಾತ್ರವಲ್ಲದೆ ಮಣ್ಣು ಕುಸಿತ ಹೆಚ್ಚಾಗುತ್ತಿದ್ದು ಇದರಿಂದ ಪಕ್ಕದಲ್ಲೇ ಇರುವ ಬೃಹತ್ ಕಟ್ಟಡ ಹಾಗೂ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ಸಂಬಂಧ ಪಟ್ಟ ಅಧಿಕಾರಿಗಳು ಗಮನ ಹರಿಸಿ ಕೂಡಲೇ ಕ್ರಮ ವಹಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಕಾಮಗಾರಿ ನಡೆಯುತ್ತಿರುವ ಪರ್ಯಾಯ ಮಾರ್ಗ ಕೂಡ ಸರಿಯಾದ ಡಾಂಬರೀಕರಣ ಇಲ್ಲದ ಕಾರಣ ಪರದಾಡುವ ವಾಹನ ಸವಾರರು ಪರದಾಡುವ ಸ್ಥಿತಿ ಇದೆ. ಉಡುಪಿ ಕಡೆ ಸಾಗುವಾಗ ಈ ಮುಂಚಿನ ಸರ್ವಿಸ್ ರೋಡ್ ಬಳಸಲಾಗುತ್ತಿದ್ದು ಡಿವೈಡರ್ ಒಡೆದು ರಸ್ತೆ ಅಗಲೀಕರಣ ಮಾಡಿದ್ದರೂ ಸೂಕ್ತ ಡಾಂಬರೀಕರಣ ಮಾಡದೆ ಅಗೆದ ರಸ್ತೆಯ ಡಾಂಬರು ತಂದು ಸಮತಟ್ಟು ಮಾಡಲಾಗಿತ್ತು. ಇದೀಗ ಮಳೆಯಲ್ಲಿ ಸಂಪೂರ್ಣ ಹಾಳಾಗಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಕೋಟ್ಯಾಂತರ ರೂಪಾಯಿ ಕಾಮಗಾರಿ ನಡೆಯುತ್ತಿದ್ದರೂ ವೈಜ್ಞಾನಿಕವಾಗಿ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳದ ರಾಷ್ಟ್ರೀಯ ಪ್ರಾಧಿಕಾರದ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.












Leave a Reply