ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಮುರುಡೇಶ್ವರದಲ್ಲಿ ನಾಲ್ವರು ಸಾವು ಕೇಸ್; 6 ಮಂದಿ ವಿರುದ್ಧ ಸುಮೊಟೋ ಕೇಸ್

ಭಟ್ಕಳ: ಮುರುಡೇಶ್ವರದಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕಿ ಸೇರಿ 6 ಮಂದಿ ವಿರುದ್ಧ ಸುಮೊಟೋ ಕೇಸ್ ದಾಖಲಾಗಿದೆ.

ಮುಖ್ಯ ಶಿಕ್ಷಕಿ ಶಶಿಕಲಾ (40) ಸುನೀಲ್ (33 ಚೌಡಪ್ಪ (34) ಎಸ್ ವಿಶ್ವನಾಥ್ (27) ಸಿ ಎನ್ ಶಾರದಮ್ಮ (37) ಹಾಗೂ ಕೆ ನರೇಶ (30) ಸೇರಿ ಆರು ಮಂದಿ ವಿರುದ್ದ ಮುರುಡೇಶ್ವರ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದಾರೆ.

ಮುರುಡೇಶ್ವರ ಸಮುದ್ರದಲ್ಲಿ ಕೊಚ್ಚಿ ಹೋಗಿದ್ದ ಮೂವರು ವಿದ್ಯಾರ್ಥಿನಿಯರ ಶವ ಪತ್ತೆಯಾಗಿದ್ದು, ಕರಾವಳಿ ಕಾವಲು ಪಡೆ ಸಿಬ್ಬಂದಿಗಳು ಬೋಟ್ ಮೂಲಕ ಮೂವರ ಮೃತ ದೇಹವನ್ನು ಹೊರತೆಗೆದಿದ್ದಾರೆ.ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗಿದ್ದ 15 ವರ್ಷದ ದೀಕ್ಷಾ, ಲಾವಣ್ಯ, ವಂದನಾ ಎಂಬ ಮೂವರು ವಿದ್ಯಾರ್ಥಿನಿಯರು ಇದೀಗ ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ಓರ್ವ ವಿದ್ಯಾರ್ಥಿನಿ ಶ್ರವಂತಿ (15) ಶವ ಪತ್ತೆಯಾಗಿತ್ತು.

ನೀರಿನಲ್ಲಿ ಕೊಚ್ಚಿ ಹೋಗಿದ್ದ ಉಳಿದ ಮೂವರು ವಿದ್ಯಾರ್ಥಿನಿಯರಿಗಾಗಿ ಶೋಧ ಕಾರ್ಯ ನಡೆಸಲಾಗಿತ್ತು. ಇದೀಗ ಮೂವರು ವಿದ್ಯಾರ್ಥಿನಿಯರ ಶವವನ್ನು ಸಮುದ್ರದಿಂದ ಹೊರತೆಗೆಯಲಾಗಿದೆ.ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊತ್ತನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಶೈಕ್ಷಣಿಕ ಪ್ರವಾಸಕ್ಕೆಂದು ಮುರುಡೆಷ್ಟರಕ್ಕೆ ಬಂದಿದ್ದರು.

ಈ ವೇಳೆ ಕಡಲ ತೀರದಲ್ಲಿ ಆಟವಾಡುವಾಗ ಅಲೆಗಳ ಅಬ್ಬರಕ್ಕೆ ಸಿಲುಕಿ 7 ವಿದ್ಯಾರ್ಥಿನಿಯರು ನೀರುಪಾಲಾಗಿದ್ದರು. ಅವರಲ್ಲಿ ಮೂವರು ವಿದ್ಯಾರ್ಥಿನಿಯರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದರು. ನಾಲ್ವರು ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿ ಶವ ಪತ್ತೆಯಾಗಿತ್ತು. ಉಳಿದ ಮೂವರು ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದರು. ಮೂವರಿಗಾಗಿ ನಿನ್ನೆಯಿಂದ ನಿರಂತರವಾಗಿ ಶೋಧಕಾರ್ಯ ಮುಂದುವರೆದಿತ್ತು. ಇದೀಗ ಮೂವರು ವಿದ್ಯಾರ್ಥಿನಿಯರ ಶವವನ್ನು ಕರಾವಳಿ ಕಾವಲು ಪಡೆ ಪತ್ತೆಮಾಡಿ ಹೊರತೆಗೆದಿದೆ.

Leave a Reply

Your email address will not be published. Required fields are marked *