ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಮಕ್ಕಳ ಭವಿಷ್ಯ ಭದ್ರವಾಗ ಬೇಕಾದರೆ ಪ್ರೌಢಶಾಲಾ ಶಿಕ್ಷಣದ ಬೆಳಕು ಅತ್ಯಗತ್ಯ: ಡಾ. ಮೋಹನ ಆಳ್ವ

ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಣ ಸಂಸ್ಥೆಗಳ ಮತ್ತು ಪೋಷಕರ ಪಾತ್ರ ಬಹು ಗಣನೀಯ. ಪ್ರೌಢಶಾಲಾ ಶಿಕ್ಷಣ  ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿಯಾಗಲಿದೆ ಎಂದು  ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾಕ್ಟರ್ ಮೋಹನ್ ಆಳ್ವಾ ಹೇಳಿದರು.

ಅವರು ಕೋಟೇಶ್ವರದ ಯುವ ಮೆರಡಿಯನ್ ಸಭಾಂಗಣದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳು ಮತ್ತು ಎಸ್ ಎಸ್ ಎಲ್ ಸಿ ಮಕ್ಕಳಿಗಾಗಿ ಪರೀಕ್ಷಾ ಪೂರ್ವ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸುತ್ತಾ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ವಿಕಸನಕ್ಕೆ ದಾರಿಯಾಗುತ್ತದೆ ಎಂದರು.

ಮೈಸೂರಿನ ಖ್ಯಾತ ಕಲಿಕಾ ಗುರು ತರಬೇತುದಾರ ಚೇತನ್ ರಾಮ್ ಕಾರ್ಯಾಗಾರ ವನ್ನು ನಡೆಸಿಕೊಟ್ಟರು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ  ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಯೂಮೆರಡಿಯನ್ ಪಾಲುದಾರ ವಿನಯ್ ಕುಮಾರ್ ಶೆಟ್ಟಿ ಶುಭ ಹಾರೈಸಿದರು. ತಾಲೂಕು ಘಟಕದ ಅಧ್ಯಕ್ಷ ಡಾ. ಉಮೇಶ್  ಪುತ್ರನ್ ಸ್ವಾಗತಿಸಿದರು. ಕಾರ್ಯದರ್ಶಿ ದಿನಕರ್ ಆರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕುಂದಾಪುರದ ಆಸು ಪಾಸಿನ ಎಂಟು ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದರು.

Leave a Reply

Your email address will not be published. Required fields are marked *