ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ರಸ್ತೆ ಸುರಕ್ಷತೆಯ ಬಗ್ಗೆ ಯುವ ಸಮುದಾಯ ಜಾಗೃತರಾಗಿ- ಡಿವೈಎಸ್ ಪಿ ಪ್ರಭು ಡಿ.ಟಿ

ಕೋಟ: ರಸ್ತೆ ಅಪಘಾತದಲ್ಲಿ ಯುವ ಸಮುದಾಯ ಹೆಚ್ಚು ಬಲಿಯಾಗುತ್ತಿದ್ದು ಈ ಬಗ್ಗೆ ಜಾಗೃತರಾಗುವುದು ಒಳಿತು ಎಂದು ಉಡುಪಿ ಉಪವಿಭಾಗದ ಡಿವೈಎಸ್ಪಿ ಪ್ರಭು ಡಿಟಿ ಹೇಳಿದರು.

ಬುಧವಾರ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಜ್ಞಾನಮಂದಿರದಲ್ಲಿ ಉಡುಪಿ ಜಿಲ್ಲಾ ಪೊಲೀಸ್, ಉಡುಪಿ ಪೊಲೀಸ್ ಉಪವಿಭಾಗ, ಬ್ರಹ್ಮಾವರ ಪೊಲೀಸ್ ವೃತ್ತ ಕೋಟ ಪೊಲೀಸ್ ಠಾಣೆ, ಹಾಗೂ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆ, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದು ಮನೆ ಕಣ್ಣಿನ ಆಸ್ಪತ್ರೆ ಇವರ ಜಂಟಿ ಆಶ್ರಯದಲ್ಲಿ ಶ್ರೀಗುರುನರಸಿಂಹ ದೇವಸ್ಥಾನ ಸಾಲಿಗ್ರಾಮ, ಪಂಚವರ್ಣ ಸಂಘಟನೆ ಕೋಟ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇವರ  ಸಹಯೋಗದೊಂದಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ – 2026 ಅಂಗವಾಗಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ, ಸೈಬರ್ ಅಪರಾಧಗಳ ಬಗ್ಗೆ ತಿಳುವಳಿಕೆ ಸಭೆ ಹಾಗೂ ತಜ್ಞ ವೈದ್ಯರಿಂದ ಉಚಿತ ನೇತ್ರ ಪರೀಕ್ಷೆ, ದಂತ ಪರೀಕ್ಷೆ, ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಉಡುಪಿ ಉಪವಿಭಾಗದ ಡಿವೈಎಸ್ಪಿ ಪ್ರಭು ಡಿ.ಟಿ. ಮಾತನಾಡಿ ರಸ್ತೆ ಸುರಕ್ಷತೆಯಲ್ಲಿ ಪೋಷಕರು ಮಕ್ಕಳಿಗೆ ವಾಹನ ನೀಡುವಾಗ ಲೈಸನ್ಸ್ ಪಡೆದು ಜಾಗೃತಿಯ ಸಂಚಾರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರಲ್ಲದೆ ಬಲಿಷ್ಟ ಸಮಾಜ ಕಟ್ಟುವಲ್ಲಿ ಯುವ ಸಮುದಾಯದ ಪಾತ್ರದ ಬಗ್ಗೆ ಸವಿಸ್ತಾರವಾಗಿ ತಿಳಿ ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮವನ್ನು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಅಧ್ಯಕ್ಷ ಡಾ.ಕೆ.ಎಸ್ ಕಾರಂತ್ ಉದ್ಘಾಟಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕೋಟ, ಸಾಲಿಗ್ರಾಮ ಸಾಸ್ತಾನ ಈ ಭಾಗದ ಹಿರಿಯ ಆಟೋ ಚಾಲಕರಾದ ರತ್ನಾಕರ ಪೈ ಕೋಟ, ವೆಂಕಟೇಶ ಪೂಜಾರಿ ಕೋಟ, ನಾರಾಯಣ ಪೂಜಾರಿ ಸಾಲಿಗ್ರಾಮ, ನಾರಾಯಣ ಗುಂಡ್ಮಿ ಇವರುಗಳನ್ನು ಗುರುತಿಸಿ ಗೌರವಿಸಲಾಯಿತು.

ಮುಖ್ಯ ಅಭ್ಯಾಗತರಾಗಿ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದು ಮನೆ ಕಣ್ಣಿನ ಆಸ್ಪತ್ರೆಯ ಸಂಯೋಜಕ ಶಂಕರ್ ಶೆಟ್ಟಿ,ಕೋಟ ಸಮುದಾಯ ಆರೋಗ್ಯ ಕೇಂದ್ರದ ವೈದ್ಯೆ ಡಾ.ಯಶಶ್ರೀ ಶೆಟ್ಟಿ,ಉಡುಪಿ ಆರ್‌ಟಿಓ ಅಧಿಕಾರಿ ಲಕ್ಷ್ಮೀನಾರಾಯಣ ನಾಯಕ್, ಕೋಟ ಆರಕ್ಷಕ ಠಾಣಾಧಿಕಾರಿ ಪ್ರವೀಣ್ ಕುಮಾರ್, ಉಪಸ್ಥಿತರಿದ್ದರು. ಪತ್ರಕರ್ತ ರವೀಂದ್ರ ಕೋಟ ಸ್ವಾಗತಿಸಿದರು. ಪಂಚವರ್ಣದ ಸುಜಾತ ಬಾಯರಿ ನಿರೂಪಿಸಿದರು. ಕ್ರೈಂ ವಿಭಾಗದ ಎಸ್‌ಐ ಮಹಂತೇಶ್ ಗೌಡ ವಂದಿಸಿದರು. ಕೋಟ ಠಾಣೆಯ ಎಎಸ್‌ಐ ಗೋಪಾಲ ಪೂಜಾರಿ ಸಹಕರಿಸಿದರು.

ರಸ್ತೆ ಸುರಕ್ಷಾ ಸಪ್ತಾಹದ ಅಂಗವಾಗಿ ಕೋಟ ಮೂರ್ ಕೈ ಯಿಂದ ಸಾಲಿಗ್ರಾಮದವರೆಗೆ  ಕಾಲ್ನಡಿಗೆ ಜಾಥ ಹಮ್ಮಿಕೊಳ್ಳಲಾಯಿತು.ಜಾಥದಲ್ಲಿ ಕೋಟ ವಿವೇಕ ವಿದ್ಯಾಸಂಸ್ಥೆ , ಆಶ್ರೀತ್ ಸಮೂಹ ಶಿಕ್ಷಣ ಸಂಸ್ಥೆ,ಫಾರ್ಚುನ್ ಸೈನ್ಸ್ ಮಾಬುಕಳ , ಇಸಿಆರ್ ಕಾಲೇಜಿನ ವಿದ್ಯಾರ್ಥಿಗಳು ಭಾಗಿಯಾದರು. ಸಪ್ತಾಹ ಜಾಥಕ್ಕೆ ಕೋಟ ವಿವೇಕ ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ಕೆ.ಜಗದೀಶ ನಾವಡ ಚಾಲನೆ ನೀಡಿದರು.

ಉಡುಪಿ ಜಿಲ್ಲಾ ಪೊಲೀಸ್, ಉಡುಪಿ ಪೊಲೀಸ್ ಉಪವಿಭಾಗ, ಬ್ರಹ್ಮಾವರ ಪೊಲೀಸ್ ವೃತ್ತ ಕೋಟ ಪೊಲೀಸ್ ಠಾಣೆ, ಹಾಗೂ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆ, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದು ಮನೆ ಕಣ್ಣಿನ ಆಸ್ಪತ್ರೆ ಇವರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ – 2026 ಅಂಗವಾಗಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ, ಸೈಬರ್ ಅಪರಾಧಗಳ ಬಗ್ಗೆ ತಿಳುವಳಿಕೆ ಸಭೆ ಹಾಗೂ ತಜ್ಞ ವೈದ್ಯರಿಂದ ಉಚಿತ ನೇತ್ರ ಪರೀಕ್ಷೆ, ದಂತ ಪರೀಕ್ಷೆ, ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮದಲ್ಲಿ ಹಿರಿಯ ಆಟೋ ಚಾಲಕರನ್ನು ಸನ್ಮಾನಿಸಲಾಯಿತು.

Leave a Reply

Your email address will not be published. Required fields are marked *