ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಬ್ರಹ್ಮಾವರ: ಹಿರಿಯ ಪತ್ರಕರ್ತ ಶೇಷಗಿರಿ ಭಟ್ ಆತ್ಮಹತ್ಯೆ…!!

ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ (45) ಅವರು ಇಂದು ಬೆಳಿಗ್ಗೆ ಆತ್ಮಹತ್ಯೆಗೆ ಶರಣಾದರು ಎಂದು ಮಾಹಿತಿ ತಿಳಿಯಲಾಗಿದೆ.

ಬ್ರಹ್ಮಾವರ ಕ್ರಾಸ್‌ ಲ್ಯಾಂಡ್ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ ಅವರು ಇಂದು ಬೆಳಿಗ್ಗೆ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಕಳೆದ ಕೆಲವು ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *