🖋️: ಸಚೀನ ಆರ್ ಜಾಧವ
ಸಾವಳಗಿ: ಜಮಖಂಡಿ ತಾಲೂಕಿನ ಹುನ್ನೂರ ಗ್ರಾಮದಲ್ಲಿ ಸಾರ್ವಜನಿಕ ಶೌಚಾಲಯ ಮತ್ತು ಮೂತ್ರಾಲಯಗಳ ಸೌಲಭ್ಯಗಳ ಕೊರತೆ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಗ್ರಾಮದಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದ್ದರೂ, ಮೂಲಭೂತ ಸ್ವಚ್ಛತಾ ವ್ಯವಸ್ಥೆಗಳು ಸರಿಯಾಗಿ ಅಭಿವೃದ್ಧಿಯಾಗಿಲ್ಲವೆಂದು ಎಂದು ಗ್ರಾಮಸ್ಥರು ಅಳಲು ವ್ಯಕ್ತಪಡಿಸಿದ್ದಾರೆ.
ಗ್ರಾಮದಲ್ಲಿ 8 ವಾರ್ಡಗಳನ್ನು ಹೊಂದಿದ್ದು, 15 ರಿಂದ 20 ಸಾವಿರ ಜನಸಂಖ್ಯೆ ಹೊಂದಿದೆ.ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಪದವಿವರೆಗೆ ಶೈಕ್ಷಣಿಕ ಸೌಲಭ್ಯ ಹೊಂದಿದ್ದರು, ಸರಿಯಾಗಿ ಬಸ್ ನಿಲ್ದಾಣಗಳಲ್ಲಿ ಯಾವುದೇ ರೀತಿಯ ಶೌಚಾಲಯ, ಮುತ್ರಾಲಯಗಳನ್ನು ಹೊಂದಿಲ್ಲದಿರುವುದು ಬೇಸರದ ಸಂಗತಿ. ಗ್ರಾಮದ ಪ್ರಮುಖ ಸ್ಥಳಗಳು, ಬಸ್ ನಿಲ್ದಾಣ ಹಾಗೂ ಮಾರುಕಟ್ಟೆ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಬಳಸಲು ಶೌಚಾಲಯಗಳು ಇಲ್ಲದ ಕಾರಣ ಮಹಿಳೆಯರು, ಹಿರಿಯರು ಹಾಗೂ ಶಾಲಾ ವಿದ್ಯಾರ್ಥಿಗಳು ಹೆಚ್ಚಿನದಾಗಿ ಸಮಸ್ಯೆ ಎದುರಿಸುತ್ತಿದ್ದಾರೆ, ವಿಶೇಷವಾಗಿ ಬೆಳಿಗ್ಗೆ ಮತ್ತು ಸಂಜೆ ವೇಳೆಯಲ್ಲಿ ಈ ಸಮಸ್ಯೆ ಇನ್ನಷ್ಟು ಗಂಭೀರವಾಗುತ್ತದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಗ್ರಾಮಸ್ಥರ ಮಾತಿನ ಪ್ರಕಾರ, ಹಲವು ಬಾರಿ ಪಂಚಾಯತ್ ಅಧಿಕಾರಿಗಳ ಗಮನಕ್ಕೆ ಈ ವಿಷಯವನ್ನು ತಂದರೂ ಇನ್ನೂ ಸಮರ್ಪಕ ಕ್ರಮ ಕೈಗೊಳ್ಳಲಾಗಿಲ್ಲ. ಸ್ವಚ್ಛತೆ ಹಾಗೂ ಆರೋಗ್ಯದ ದೃಷ್ಟಿಯಿಂದ ಇದು ಅತ್ಯಂತ ಅಗತ್ಯವಾದ ಮೂಲಸೌಕರ್ಯವಾಗಿದ್ದು, ತಕ್ಷಣ ಶೌಚಾಲಯ ಮತ್ತು ಮೂತ್ರಾಲಯಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಸ್ಥಳೀಯರು ಹೇಳುವಂತೆ, ಸರ್ಕಾರ ಸ್ವಚ್ಛ ಭಾರತ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದರೂ, ಗ್ರಾಮ ಮಟ್ಟದಲ್ಲಿ ಅದರ ಪ್ರಯೋಜನ ಎಲ್ಲೆಡೆ ತಲುಪಿಲ್ಲ. ಈ ಹಿನ್ನೆಲೆ ಗ್ರಾಮದಲ್ಲಿ ಶೀಘ್ರವಾಗಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು ಎಂಬ ಬೇಡಿಕೆ ಕೇಳಿಬರುತ್ತಿದೆ.

ಮೂತ್ರಾಲಯಗಳ ಅವ್ಯವಸ್ಥೆ….
ಗ್ರಾಮದಲ್ಲಿ ನಿರ್ಮಿಸಲಾದ ಗಾಂಧಿ ವೃತದ ಹತ್ತಿರ ಸಾರ್ವಜನಿಕ ಮೂತ್ರಾಲಯಗಳು ಅಸ್ವಚ್ಛವಾಗಿದ್ದು ದುರ್ಗಂಧದಿಂದ ಬಳಲಿಸುತ್ತಿವೆ. ಸರಿಯಾದ ನಿರ್ವಹಣೆ ಇಲ್ಲದೆ ಅವ್ಯವಸ್ಥೆಯಿಂದ ಕೂಡಿದ್ದು, ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಲವು ದಿನಗಳಿಂದ ಸ್ವಚ್ಛತೆ ಕೊರತೆ, ನೀರಿನ ಅಭಾವ ಹಾಗೂ ದುರಸ್ಥಿ ಕಾರ್ಯಗಳಿಲ್ಲದ ಕಾರಣ ಸಾರ್ವಜನಿಕರಿಗೆ ಈ ಸೌಲಭ್ಯಗಳನ್ನು ಬಳಸಲು ಕಷ್ಟವಾಗುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ.
ಗ್ರಾಮದ ಪ್ರಮುಖ ಭಾಗಗಳಲ್ಲಿ ಇರುವ ಶೌಚಾಲಯಗಳು. ಕೆಲವು ಸ್ಥಳಗಳಲ್ಲಿ ನೀರಿನ ವ್ಯವಸ್ಥೆ ಇಲ್ಲದೇ ಇರುವುದರಿಂದ ಜನರು ಬಳಸಲು ಹಿಂಜರಿಯುತ್ತಿದ್ದಾರೆ. ವಿಶೇಷವಾಗಿ ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ.ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಶೌಚಾಲಯ ಮತ್ತು ಮೂತ್ರಾಲಯಗಳ ನಿರ್ವಹಣೆ ಅತ್ಯಂತ ಅಗತ್ಯವಾಗಿದ್ದು, ತಕ್ಷಣ ಸ್ವಚ್ಛತೆ ಹಾಗೂ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಬೇಕು ಇದಲ್ಲದೆ, ನಿಯಮಿತ ಸ್ವಚ್ಛತಾ ಕಾರ್ಯ, ನೀರಿನ ಸರಬರಾಜು ಹಾಗೂ ನಿರ್ವಹಣೆಗೆ ವಿಶೇಷ ಗಮನ ಹರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಗ್ರಾಮಸ್ಥರ ಪ್ರಕಾರ, ಈ ಸಮಸ್ಯೆಯನ್ನು ಗ್ರಾಮ ಪಂಚಾಯತ್ ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ತಂದಿದ್ದರೂ ಸೂಕ್ತ ಕ್ರಮ ಕೈಗೊಳ್ಳಲಾಗಿಲ್ಲ.
ಶೌಚಾಲಯಗಳಿಗೆ ಬೀಗ – ಸಾರ್ವಜನಿಕರ ಸಂಕಷ್ಟ:
ಗ್ರಾಮ ಪಂಚಾಯಿತಿ ಹಿಂದುಗಡೆ ನಿರ್ಮಿಸಲಾದ ಸಾರ್ವಜನಿಕ ಶೌಚಾಲಯಗಳು ಇದ್ದರೂ ಅವುಗಳಿಗೆ ಬೀಗ ಹಾಕಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಸಾರ್ವಜನಿಕರ ಬಳಕೆಗೆ ನಿರ್ಮಿಸಲಾದ ಈ ಸೌಲಭ್ಯಗಳು ಬಂದ್ ಆಗಿರುವುದರಿಂದ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.ಇದರಿಂದ ಪ್ರಯಾಣಿಕರು, ವ್ಯಾಪಾರಿಗಳು, ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಮಸ್ಯೆ ಎದುರಿಸುತ್ತಿದ್ದಾರೆ. ತುರ್ತು ಸಂದರ್ಭದಲ್ಲಿ ಬಳಸಲು ಸೌಲಭ್ಯ ಇಲ್ಲದ ಕಾರಣ ಜನರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಗ್ರಾಮಸ್ಥರ ಪ್ರಕಾರ, ಶೌಚಾಲಯಗಳನ್ನು ನಿರ್ವಹಿಸುವ ಜವಾಬ್ದಾರಿ ಹೊಂದಿರುವ ಸಂಬಂಧಿತ ಅಧಿಕಾರಿಗಳು ಸರಿಯಾದ ಕ್ರಮ ಕೈಗೊಳ್ಳದಿರುವುದರಿಂದ ಈ ಪರಿಸ್ಥಿತಿ ಉಂಟಾಗಿದೆ.
ಸಾರ್ವಜನಿಕರ ಹಣದಲ್ಲಿ ನಿರ್ಮಿಸಲಾದ ಶೌಚಾಲಯಗಳು ಬಳಕೆಗೆ ಮುಕ್ತವಾಗಿರಬೇಕು ಎಂದು ಜನರು ಒತ್ತಾಯಿಸಿದ್ದಾರೆ.ಗ್ರಾಮ ಪಂಚಾಯತ್ ತಕ್ಷಣ ಗಮನಹರಿಸಿ ಶೌಚಾಲಯಗಳನ್ನು ತೆರೆಯುವ ಜೊತೆಗೆ ಸ್ವಚ್ಛತೆ, ನೀರಿನ ವ್ಯವಸ್ಥೆ ಹಾಗೂ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಸಾರ್ವಜನಿಕರ ಬಳಕೆಗೆ ನಿರ್ಮಿಸಲಾದ ಈ ಸೌಲಭ್ಯಗಳು ಬಂದ್ ಆಗಿರುವುದರಿಂದ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.ಇದರಿಂದ ಪ್ರಯಾಣಿಕರು, ವ್ಯಾಪಾರಿಗಳು, ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಮಸ್ಯೆ ಎದುರಿಸುತ್ತಿದ್ದಾರೆ. ಹಾಗಾಗಿ ಗ್ರಾಮ ಪಂಚಾಯತ್ ಹಾಗೂ ಸಂಬಂಧಿತ ಅಧಿಕಾರಿಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು.
-ಶಂಕ್ರಯ್ಯ ಕಾಡದೇವರಮಠ
ಹುನ್ನೂರ ಗ್ರಾಮಸ್ಥ
ಸಾಮೂಹಿಕ ಶೌಚಾಲಯ ಬಳಕೆಯಲ್ಲಿ ಇಡುವುದು ಕಷ್ಟವಾಗುತ್ತಿದೆ.ಅತಿ ಅವಶ್ಯಕವಿದ್ದಲ್ಲಿ ಶೌಚಾಲಯ ಅಥವಾ ಮುತ್ರಾಲಯಗಳನ್ನು ನಿರ್ಮಿಸಲಾಗುವುದು. ಮುಂದಿನ ಕ್ರಿಯಾ ಯೋಜನೆಯಲ್ಲಿ ಅಳವಡಿಸಿಕೊಂಡು ನಿರ್ಮಿಸಲಾಗುವುದು.
ಸಚಿನ ಮಾಚಕನೂರ
ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ
















Leave a Reply