ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ರಾಮ ಮೊಗವೀರ ಕೋಟ ಅವರಿಗೆ ‘ಗೆಳೆಯರ ಬಳಗ ಕಾರಂತ ಪುರಸ್ಕಾರ–2026’

ಕಾರ್ಕಡ ಸಾಲಿಗ್ರಾಮ: ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಪ್ರತಿವರ್ಷವೂ ನೀಡಲಾಗುತ್ತಿರುವ ‘ಗೆಳೆಯರ ಬಳಗ ಕಾರಂತ ಪುರಸ್ಕಾರ–2026’ಕ್ಕೆ ಈ ನಾಡಿನ ಹಿರಿಯರಾದ ಹಾಗೂ ಡಾ. ಶಿವರಾಮ ಕಾರಂತರ ಆತ್ಮೀಯ ಒಡನಾಡಿಯಾಗಿದ್ದ ಶ್ರೀ ರಾಮ ಮೊಗವೀರ ಕೋಟ ಅವರು ಆಯ್ಕೆಯಾಗಿದ್ದಾರೆ.

ಈ ಹಿಂದೆ ಶ್ರೀಮತಿ ಮಾಲಿನಿ ಮಲ್ಯ, ಶ್ರೀ ಎಸ್. ನಾರಾಯಣ ರಾವ್, ಪೇತ್ರಿ ಮಾಧವ ನಾಯಕ್, ಶ್ರೀ ಶ್ರೀನಿವಾಸ ಸಾಸ್ತಾನ, ಶ್ರೀ ಹಿರಿಯಡ್ಕ ಗೋಪಾಲರಾವ್, ಶ್ರೀ ಎಚ್. ಇಬ್ರಾಹಿಂ ಸಾಹೇಬ್, ಶ್ರೀ ಪಾಂಡೇಶ್ವರ ಚಂದ್ರಶೇಖರ ಚಡಗ, ಶ್ರೀ ಬನ್ನಂಜೆ ಸಂಜೀವ ಸುವರ್ಣ, ಶ್ರೀಮತಿ ವೈದೇಹಿ, ಡಾ. ನಾ. ಮೊಗಸಾಲೆ ಹಾಗೂ ಶ್ರೀಮತಿ ಶಾಕುಂತಲಾ ಭಟ್ ಅವರು ‘ಗೆಳೆಯರ ಬಳಗ ಕಾರಂತ ಪುರಸ್ಕಾರ’ಕ್ಕೆ ಭಾಜನರಾಗಿದ್ದಾರೆ.ಪುರಸ್ಕಾರವು ಗೌರವಧನ, ಸನ್ಮಾನ ಪತ್ರ, ಫಲಪುಷ್ಪ ಹಾಗೂ ಶಾಲು ಸೇರಿದಂತೆ ಗೌರವಪೂರ್ವಕ ಸನ್ಮಾನವನ್ನು ಒಳಗೊಂಡಿರುತ್ತದೆ.

‘ಗೆಳೆಯರ ಬಳಗ ಕಾರಂತ ಪುರಸ್ಕಾರ–2026’ ಪ್ರದಾನ ಸಮಾರಂಭವು ಅಕ್ಟೋಬರ್ 11ರ ಭಾನುವಾರ ಸಂಜೆ ಸಾಲಿಗ್ರಾಮದ ಶ್ರೀ ಗುರುನರಸಿಂಹ ಬಯಲು ರಂಗಮಂದಿರದಲ್ಲಿ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಕುರಿತು ಗೆಳೆಯರ ಬಳಗದ ಅಧ್ಯಕ್ಷ ಶ್ರೀ ಕೆ. ತಾರಾನಾಥ ಹೊಳ್ಳ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *