ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೊಮೆ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ತಾಲೂಕಿನ ಉತ್ತಮ ಗುಣಮಟ್ಟದ ಸಂಘ ಪ್ರಶಸ್ತಿ

ತೆಕ್ಕಟ್ಟೆ: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟ, ಮಂಗಳೂರು ವತಿಯಿಂದ 2025–26ನೇ ಸಾಲಿನ ತಾಲೂಕಿನ ಉತ್ತಮ ಗುಣಮಟ್ಟದ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿಯನ್ನು ಕೊಮೆ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನೀಡಿ ಗೌರವಿಸಲಾಯಿತು.ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ರಾಜು ಪೂಜಾರಿ ಹಾಗೂ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಅವರು ಸ್ವೀಕರಿಸಿದರು.

ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊಮೆ ಹಾಲು ಉತ್ಪಾದಕರ ಸಹಕಾರಿ ಸಂಘವು ಹೈನುಗಾರರ ಅಭಿವೃದ್ಧಿ ಹಾಗೂ ಗುಣಮಟ್ಟದ ಹಾಲು ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದೆ.

ಸಂಘದಲ್ಲಿ ಸಾಂದ್ರ ಶೀತಲೀಕರಣ ಘಟಕ (BMC) ಹೊಂದಿದ್ದು ಸಂಘವು ಇದುವರೆಗೆ ಮೂರು ಬಾರಿ ಉತ್ತಮ BMC ಪ್ರಶಸ್ತಿ, ನಾಲ್ಕು ಬಾರಿ ಉತ್ತಮ ಗುಣಮಟ್ಟದ ಸಂಘ ಪ್ರಶಸ್ತಿ ಹಾಗೂ ಎರಡು ಬಾರಿ ತಾಲೂಕಿನ ಅತ್ಯುತ್ತಮ ಸಂಘ ಪ್ರಶಸ್ತಿ ಪಡೆದುಕೊಂಡಿರುವುದು ಸಂಘದ ಗುಣಮಟ್ಟದ ಕಾರ್ಯನಿರ್ವಹಣೆಗೆ ಸಾಕ್ಷಿಯಾಗಿದೆ.

ಸಂಘದ ಅಧ್ಯಕ್ಷರು, ಕಾರ್ಯನಿರ್ವಹಣಾಧಿಕಾರಿ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಸಿಬ್ಬಂದಿ ಮತ್ತು ಹೈನುಗಾರರ ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ.

Leave a Reply

Your email address will not be published. Required fields are marked *