ಕೋಟ: ಶ್ರೀ ರಾಮ ಗೆಳೆಯರ ಬಳಗ ಕೋಡಿ ಕನ್ಯಾಣ ವತಿಯಿಂದ ಪೌರಕಾರ್ಮಿಕರ ದಿನಾಚರಣೆಯ ಪ್ರಯುಕ್ತಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರನ್ನು ವಿಶೇಷವಾಗಿ ಅವರ ಮನೆಗೆ ತೆರಳಿ ಸನ್ಮಾನಿಸಲಾಯಿತು.
ಈ ಹಿನ್ನಲೆಯಲ್ಲಿ ಸಂಘದ ಅಧ್ಯಕ್ಷರಾದ ಯಾದವ ಕರ್ಕೇರ ಮಾತನಾಡಿನಮ್ಮ ಊರು ಹಾಗೂ ಪರಿಸರವನ್ನು ಸ್ವಚ್ಛವಾಗಿಡುವಲ್ಲಿ ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದೆ. ಪ್ರತಿನಿತ್ಯ ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತಿರುವ ಪೌರಕಾರ್ಮಿಕರ ಸೇವೆಯನ್ನು ಗುರುತಿಸಿ, ನಮ್ಮ ಬಳಗ ಅವರ ಮನೆಗಳಿಗೆ ತೆರಳಿ ಆತ್ಮೀಯವಾಗಿ ಗೌರವ ಸಲ್ಲಿಸಿದ್ದೇವೆ ಇಂತಹ ಕಾರ್ಯ ಭಗವಂತನಿಗೆ ಭಕ್ತಿ ಸಲ್ಲಿಸುವ ಕಾರ್ಯಕ್ಕೆ ಸಮಾನವಾದದ್ದು ಎಂದರು.ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.












Leave a Reply