ಕೋಟ : ಇಲ್ಲಿನ ಕಾರಣಿಕ ಪುರಾಣ ಪ್ರಸಿದ್ಧ ಕ್ಷೇತ್ರವಾದ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದ ಶರನ್ನವರಾತ್ರಿ ಉತ್ಸವದ ಆಮಂತ್ರಣ ಪತ್ರಕೆ ಬಿಡುಗಡೆ ಭಾನುವಾರ ದೇಗುಲದಲ್ಲಿ ಜರಗಿತು.ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ್ ಸಿ ಕುಂದರ್ ಉತ್ಸವದ ಪತ್ರಿಕೆಯನ್ನು ಬಿಡುಗಡೆಗೊಳಿಸಿ ದೇಗುಲದಲ್ಲಿ ನಡೆಯುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಲು ಕೋರಿದರು.
ದೇಗುಲದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಎಂ.ಶಿವ ಪೂಜಾರಿ, ಸುಭಾಷ್ ಶೆಟ್ಟಿ, ಸುಧಾ ಎ ಪೂಜಾರಿ, ಗಣೇಶ್ ನೆಲ್ಲಿಬೆಟ್ಟು, ಸುಬ್ರಾಯ ಜೋಗಿ,ಜ್ಯೋತಿ ಡಿ ಕಾಂಚನ್, ಚಂದ್ರ ಆಚಾರ್,ಮಾಜಿ ಟ್ರಸ್ಟಿ ಸುಬ್ರಾಯ ಆಚಾರ್, ಸೇರಿದಂತೆ ಸ್ಥಳೀಯರಾದ ಭುಜಂಗ ಗುರಿಕಾರ,ಭದ್ರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.















Leave a Reply